ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​

|

Updated on: Jul 04, 2024 | 5:42 PM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಜೈಲು ವಾಸು ಅನುಭವಿಸುತ್ತಿದ್ದಾರೆ. ಇಂದು (ಜುಲೈ 4) ದರ್ಶನ್​ಗೆ ಜಾಮೀನು ಸಿಗಬಹುದಾ ಎಂಬ ಕುತೂಹಲ ಅನೇಕರಿಗೆ ಇತ್ತು. ಆದರೆ ಅವರಿಗೆ ಈ ಹಂತದಲ್ಲಿ ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಸಹ ಅವರು ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ...

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್​ ಅವರಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಜುಲೈ 18ರ ತನಕ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ 17 ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಇಂದು (ಜು.4) ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳಿಗೆ ಜಾಮೀನು ಸಿಗುತ್ತಾ ಎಂಬ ಕುತೂಹಲ ಅಭಿಮಾನಿಗಳ ಮನದಲ್ಲಿ ಇತ್ತು. ಆದರೆ ಅವರಿಗೆ ಸದ್ಯಕ್ಕಂತೂ ಜಾಮೀನು ಸಿಗುವ ಸಾಧ್ಯತೆ ಇಲ್ಲ ಎಂದು ವಕೀಲರು ತಿಳಿಸಿದ್ದಾರೆ. ಅದಕ್ಕೆ ಕಾರಣವೇನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಐಪಿಸಿ ಕಲಂ 302ರ ಅಡಿಯಲ್ಲಿ ಬರುವ ಅಪರಾಧಗಳಲ್ಲಿ ಜಾಮೀನು ಅರ್ಜಿಯನ್ನು ಪರಿಶೀಲಿಸಲು ಗೌರವಾನ್ವಿತ ಮ್ಯಾಜಿಸ್ಟ್ರೇಟ್​ ನ್ಯಾಯಾಲಯಕ್ಕೆ ಸುಪರ್ದಿ ಇರುವುದಿಲ್ಲ. ಹಾಗಾಗಿ ಇಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ತುಂಬಾ ಗಂಭೀರ ಆರೋಗ್ಯ ಸಮಸ್ಯೆ ಇದ್ದರೆ ಮಾತ್ರ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯ ಪ್ರಕ್ರಿಯೆ ನಡೆದಿದೆ ಅಷ್ಟೇ’ ಎಂದು ಆರೋಪಿ ನಿಖಿಲ್​ ಪರ ವಕೀಲರಾದ ರಂಗನಾಥ ರೆಡ್ಡಿ ಹೇಳಿದ್ದಾರೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.