ಸುದೀಪ್ ಬಿಗ್ ಬಾಸ್ ತೊರೆಯಲು ಅಸಲಿ ಕಾರಣ ತಿಳಿಸಿದ ಸ್ನೇಹಿತ ರಾಜೀವ್

Edited By:

Updated on: Jan 25, 2025 | 5:45 PM

ಬಿಗ್ ಬಾಸ್ ಮಾಜಿ ಸ್ಪರ್ಧಿ ರಾಜೀವ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ಆಪ್ತವಾಗಿರುವ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಬಳಿಕ ಸುದೀಪ್ ಅವರು ನಿರೂಪಣೆ ಮಾಡಲ್ಲ ಎಂದಿದ್ದು ಯಾಕೆ ಎಂಬ ಬಗ್ಗೆ ರಾಜೀವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ಕಾರ್ಯಕ್ರಮವನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಿದ್ದರೂ ಕೂಡ ಅವರು ಬಿಗ್ ಬಾಸ್ ನಿರೂಪಣೆ ಇನ್ಮುಂದೆ ಮಾಡಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅದಕ್ಕೆ ಕಾರಣ ಏನಿರಬಹುದು ಎಂಬ ಬಗ್ಗೆ ಸುದೀಪ್ ಅವರ ಆಪ್ತ ರಾಜೀವ್ ಮಾತನಾಡಿದ್ದಾರೆ. ‘ಶೋ ಒಪ್ಪಿಕೊಂಡ ಮೇಲೆ ಎಲ್ಲೇ ಇದ್ದರೂ ಓಡಿಬರಬೇಕಾಗುತ್ತದೆ. ಅದರಿಂದ ಸುಸ್ತಾಗುತ್ತೆ ಅಂತ ಸುದೀಪ್ ಸರ್ ಹೇಳಿದ್ದಾರೆ. ಬ್ರೇಕ್ ಬೇಕು ಅನುಸುತ್ತೆ ಎಂದಿದ್ದಾರೆ’ ಎಂದು ರಾಜೀವ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More