ಆರ್‌ಎಸ್‌ಎಸ್ ಒಪ್ಪಿಕೊಂಡವರು ಕಾಂಗ್ರೆಸ್‌ನಲ್ಲಿ ಇರಲು ಸಾಧ್ಯವಿಲ್ಲ: ಎಂಎಲ್ಸಿ ಬಿಕೆ ಹರಿಪ್ರಸಾದ್
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಆರ್‌ಎಸ್‌ಎಸ್ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಜಾಗವಿಲ್ಲ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರು ಈಗಾಗಲೇ ಸ್ಲೀಪರ್ ಸೆಲ್ಗಳನ್ನು ಪಕ್ಷದಿಂದ ಹೊರಹಾಕುವಂತೆ ಸೂಚಿಸಿದ್ದಾರೆ. ಆರ್‌ಎಸ್‌ಎಸ್ ಅನ್ನು ಒಪ್ಪಿಕೊಂಡವರು ಕಾಂಗ್ರೆಸ್‌ನಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 01: ಆರ್‌ಎಸ್‌ಎಸ್ (RSS) ಪರ ಇದ್ದವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಜಾಗವಿಲ್ಲ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಒಪ್ಪಿಕೊಂಡವರು ಕಾಂಗ್ರೆಸ್‌ನಲ್ಲಿ ಇರಲು ಸಾಧ್ಯವಿಲ್ಲ. ಕಾಂಗ್ರೆಸ್ನಲ್ಲಿರುವ ಸ್ಲೀಪರ್ ಸೆಲ್ಗಳು ಹೊರಗಡೆ ಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
