Amit Shah in Sandur; ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ರಾಜ್ಯದ ಉದ್ದಗಲಕ್ಕೆ ಓಡಾಡಿ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರುತ್ತೇನೆ: ಬಿಎಸ್ ಯಡಿಯೂರಪ್ಪ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಮರ್ಥ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಬಳ್ಳಾರಿ: ಜಿಲ್ಲೆಯ ಸಂಡೂರಿನ ಎಸ್ ಆರ್ ಎಸ್ ಮೈದಾನದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ (BS Yediyurappa) ಯಡಿಯೂರಪ್ಪನವರು ತಾವು ಈ ಬಾರಿಯ ವಿಧಾನಸಭಾ ಚುನಾವನೆಯಲ್ಲಿ ಸ್ಪರ್ಧಿಸಿದಿದ್ದರೂ ರಾಜ್ಯದ ಉದ್ದಗಲಕ್ಕೆ ಓಡಾಡಿ ಬಿಜೆಪಿ ಕನಿಷ್ಟ 140 ಸೀಟುಗಳನ್ನು ಗೆಲ್ಲಿಸುವುದರೊಂದಿಗೆ ಪುನಃ ಅಧಿಕಾರಕ್ಕೆ ತರುವ ಸಂಕಲ್ಪ ಹೊಂದಿರುವುದಾಗಿ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಅವರ ಸಮರ್ಥ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ