Video: ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

Updated on: Jan 10, 2025 | 1:05 PM

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾವಿರಾರು ಮನೆಗಳು ಸುಟ್ಟು ಭಸ್ಮವಾಗಿದೆ, ಇದುವರೆಗೆ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮನೆಗಳು, ವ್ಯಾಪಾರ ಮಳಿಗೆಗಳು ಎಲ್ಲವೂ ಸುಟ್ಟು ಕರಕಲಾಗಿವೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾವಿರಾರು ಮನೆಗಳು ಸುಟ್ಟು ಭಸ್ಮವಾಗಿದೆ, ಇದುವರೆಗೆ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮನೆಗಳು, ವ್ಯಾಪಾರ ಮಳಿಗೆಗಳು ಎಲ್ಲವೂ ಸುಟ್ಟು ಕರಕಲಾಗಿವೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್‌ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 2,000 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 10, 2025 01:05 PM
Loading...
Unable to load recommendations.
Follow Us