ಮಂಗಳೂರಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸಲ್ಮಾನರಿಂದ ಬೃಹತ್ ಪ್ರತಿಭಟನೆ, ನಿರೀಕ್ಷೆಗೂ ಮೀರಿದ ಜನ
ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಅಡ್ಯಾರ್ ಕಣ್ಣೂರು ಷಾ ಮೈದಾನದ ಸುತ್ತಮುತ್ತ ಮತ್ತು ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಅದರೆ, ನಿರೀಕ್ಷೆಗೆ ಮೀರಿದ ಜನ ಧರಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಕಷ್ಟ ಪಡಬೇಕಾಯಿತು. ಪ್ರತಿಭಟನೆಯ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ಅನ್ನು ಬಂದ್ ಮಾಡಲಾಗಿದೆ.
ಮಂಗಳೂರು, ಏಪ್ರಿಲ್ 18: ಮಂಗಳೂರಿನ ಉಲೇಮಾ ಸಮನ್ವಯ ಸಮಿತಿ (Ulema Coordination Committee), ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಇತರ ಹಲವಾರು ಮುಸ್ಲಿಂ ಸಂಘಟನೆಗಳು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಸಾವಿರಾರು ಜನ ಸೇರಿದ್ದಾರೆ. ಮಂಗಳೂರು ನಗರದ ಅಡ್ಯಾರ್ ಷಾ ಗಾರ್ಡನ್ ಮೈದಾನದಲ್ಲಿ ಮುಸಲ್ಮಾನರು ಒಗ್ಗೂಡಿ ವಕ್ಫ್ ಬೋರ್ಡ್ ಪರ ಘೋಷಣೆಗಳನ್ನು ಕೂಗಿದರು. ಶುಕ್ರವಾರದ ಪ್ರಾರ್ಥನೆ ನಂತರ ಪ್ರತಿಭಟನೆ ಶುರುವಾಗಿದೆ ಎಂದು ನಮ್ಮ ಮಂಗಳೂರು ವರದಿಗಾರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos

ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್: ಬದಲಿ ಮಾರ್ಗ ಸೂಚನೆ

ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ

ರಶ್ಮಿಕಾಗೆ ಮೈಸೂರು ಸ್ಯಾಂಡಲ್ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
