ಮಂಗಳೂರಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸಲ್ಮಾನರಿಂದ ಬೃಹತ್ ಪ್ರತಿಭಟನೆ, ನಿರೀಕ್ಷೆಗೂ ಮೀರಿದ ಜನ

Updated on: Apr 18, 2025 | 6:16 PM

ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಅಡ್ಯಾರ್ ಕಣ್ಣೂರು‌ ಷಾ ಮೈದಾನದ ಸುತ್ತಮುತ್ತ ಮತ್ತು ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಅದರೆ, ನಿರೀಕ್ಷೆಗೆ ಮೀರಿದ ಜನ ಧರಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಕಷ್ಟ ಪಡಬೇಕಾಯಿತು. ಪ್ರತಿಭಟನೆಯ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ಅನ್ನು ಬಂದ್ ಮಾಡಲಾಗಿದೆ.

ಮಂಗಳೂರು, ಏಪ್ರಿಲ್ 18: ಮಂಗಳೂರಿನ ಉಲೇಮಾ ಸಮನ್ವಯ ಸಮಿತಿ (Ulema Coordination Committee), ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಇತರ ಹಲವಾರು ಮುಸ್ಲಿಂ ಸಂಘಟನೆಗಳು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಸಾವಿರಾರು ಜನ ಸೇರಿದ್ದಾರೆ. ಮಂಗಳೂರು ನಗರದ ಅಡ್ಯಾರ್ ಷಾ ಗಾರ್ಡನ್ ಮೈದಾನದಲ್ಲಿ ಮುಸಲ್ಮಾನರು ಒಗ್ಗೂಡಿ ವಕ್ಫ್ ಬೋರ್ಡ್ ಪರ ಘೋಷಣೆಗಳನ್ನು ಕೂಗಿದರು. ಶುಕ್ರವಾರದ ಪ್ರಾರ್ಥನೆ ನಂತರ ಪ್ರತಿಭಟನೆ ಶುರುವಾಗಿದೆ ಎಂದು ನಮ್ಮ ಮಂಗಳೂರು ವರದಿಗಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಡಿಎಂಕೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More