ಜನಸ್ಪಂದನಕ್ಕೆ ಹರಿದು ಬಂದ ಜನ ಸಾಗರ; ವರ್ಗಾವಣೆಗಾಗಿ ಕಣ್ಣೀರಿಟ್ಟ ಶಿಕ್ಷಕಿ
ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ. ಹೀಗಾಗಿ ರಾಜ್ಯದ ಅನೇಕ ಜಿಲ್ಲೆಗಳಿಂದ ಸಾವಿರಾರು ಜನರು ವಿಧಾನಸೌಧದತ್ತ ಧಾವಿಸಿದ್ದಾರೆ. ವರ್ಗಾವಣೆ ಕೋರಿ ಶಿಕ್ಷಕಿಯೊಬ್ಬರು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ತಾಯಿಯನ್ನ ನೋಡಿಕೊಳ್ಳಲು ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟಕ್ಕೆ ವರ್ಗಾವಣೆ ಕೋರಿ ಶಿಕ್ಷಕಿ ಸುಷ್ಮಾ ಅವರು ವಿಧಾನಸೌಧಕ್ಕೆ ಬಂದಿದ್ದಾರೆ.
ಬೆಂಗಳೂರು, ಫೆ.08: ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಜನಸ್ಪಂದನ (Jana Spandana) ಕಾರ್ಯಕ್ರಮ ನಡೆಸಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ. ಹೀಗಾಗಿ ರಾಜ್ಯದ ಅನೇಕ ಜಿಲ್ಲೆಗಳಿಂದ ಸಾವಿರಾರು ಜನರು ವಿಧಾನಸೌಧದತ್ತ ಧಾವಿಸಿದ್ದಾರೆ. ತಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂಬ ಮಹಾದಾಸೆಯಿಂದ ಸಾವಿರಾರು ಮಂದಿ ವಿಧಾನಸೌಧದ ಬಳಿ ಕಾಣಿಸಿಕೊಂಡಿದ್ದಾರೆ.
ಕೆಲಸಕ್ಕೆ ತೆರಳುವಾಗ ಅಪಘಾತವಾಗಿ ಕಾಲು ಕಳೆದುಕೊಂಡಿರುವ ವ್ಯಕ್ತಿಯಿಂದ ಜೀವನ ನಡೆಲು ಕಷ್ಟ ಆಗುತ್ತಿದ್ದು ಸಹಾಯಕ್ಕಾಗಿ ಜನ ಸ್ಪಂದನಾ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಚಾಮರಾಜನಗರ ಮೂಲದ ನಾಗರಾಜ್ ಅವರು ಕುಟುಂಬ ಸಮೇತ ಜನ ಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕಾಲಿಲ್ಲದೆ ಜೀವನ ಸಾಗಿಸುತ್ತಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಶಿಕ್ಷಕಿಯ ಕಣ್ಣೀರು
ಇನ್ನು ವರ್ಗಾವಣೆ ಕೋರಿ ಶಿಕ್ಷಕಿಯೊಬ್ಬರು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ತಾಯಿಯನ್ನ ನೋಡಿಕೊಳ್ಳಲು ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟಕ್ಕೆ ವರ್ಗಾವಣೆ ಕೋರಿ ಶಿಕ್ಷಕಿ ಸುಷ್ಮಾ ಅವರು ವಿಧಾನಸೌಧಕ್ಕೆ ಬಂದಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓಡಲು ಇದರ ಮೇಲೆ ಕ್ಲಿಕ್ ಮಾಡಿ