[lazy-load-videos-and-sticky-control id=”KEoksf7TMLI”]
ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.
ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.
ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.
Published On - 12:20 pm, Sun, 2 August 20