AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್; ಮೂವರ ಬಂಧನ

ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್; ಮೂವರ ಬಂಧನ

ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 15, 2023 | 4:08 PM

Share

ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ (Wheeling) ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ (Kamakshipalya) ಸಂಚಾರ ಪೊಲೀಸರು ಬಂಧಿಸಿದ್ದಾರೆ. ಇನ್ನು ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು.

ಬೆಂಗಳೂರು, ನ.15: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ (Wheeling) ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ (Kamakshipalya) ಸಂಚಾರ ಪೊಲೀಸರು ಬಂಧಿಸಿದ್ದಾರೆ. ಇನ್ನು ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಇದೀಗ ಪೊಲೀಸರು ಇವರನ್ನು ಬಂಧಿಸಿ, ಬೈಕ್ ಸೀಜ್ ಮಾಡಿ ಪೋಷಕರಿಗೆ 25 ಸಾವಿರ ದಂಡ ಹಾಕಿದ್ದಾರೆ. ಇನ್ನು ಪೊಲೀಸರು, ಈ ಬೈಕ್‌ ವ್ಹೀಲರ್ಸ್ ವಿರುದ್ಧ ಬರೊಬ್ಬರಿ 14 ಕೇಸ್‌ ದಾಖಲಿಸಲಿದ್ದು, ಆರೋಪಿಗಳ ಪ್ರೊಫೈಲ್ ತೆರೆದು ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ಸಿದ್ಧತೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More