ಕಾಂಗ್ರೆಸ್ ಪ್ರತಿಭಟನೆ ವೇಳೆ ಪೊಲೀಸರ ಎದುರೇ ಬಸ್ಗೆ ಕಲ್ಲು ತೂರಿದ್ದ ಮೂವರ ಬಂಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 19, 2024 | 4:12 PM

ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದ್ದು, ಈ ವೇಳೆ ಪೊಲೀಸ್​ ಎದರಲ್ಲೇ ಖಾಸಗಿ ಬಸ್​ಗೆ ಕಲ್ಲು ತೂರಿದ್ದ ಮೂವರು ಕಾರ್ಯಕರ್ತರನ್ನು ಬಂಧಿಸಿರುವಂತಹ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ಬಸ್ ತಡೆದು ಗೂಂಡಾಗಿರಿ ನಡೆಸಿದ್ದಾರೆ.

ಮಂಗಳೂರು, ಆಗಸ್ಟ್​ 19: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ವಿಚಾರವಾಗಿ ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ (congress) ಕಾರ್ಯಕರ್ತರು ರೋಡಿಗಿಳಿದಿದ್ದಾರೆ. ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಪ್ರತಿಭಟನೆ ವೇಳೆ ಬಸ್​ಗೆ ಕಲ್ಲು ತೂರಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ ಹಾಗೂ ಕಾರ್ಯಕರ್ತರಾದ ಶಾಹುಲ್ ಹಮೀದ್, ಅನ್ವರ್ ಬಂಧಿತರು. ಪ್ರತಿಭಟನೆ ವೇಳೆ ಖಾಸಗಿ ಸಿಟಿ ಬಸ್ ತಡೆದು ಗೂಂಡಾಗಿರಿ ನಡೆಸಿದ್ದರು. ಈ ವೇಳೆ ಪೊಲೀಸರ ಎದುರೇ ಬಸ್​ನ ಮುಂದಿನ ಗಾಜಿಗೆ ಕಲ್ಲುತೂರಿದ್ದಾರೆ. ಕಾಲಿನಿಂದ ಒದ್ದು ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಸದ್ಯ ಕಲ್ಲು ತೂರಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on