ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್
ರಾಮನಗರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವ ಪ್ರೀತಿ ಹೆಸರಲ್ಲಿ ಯುವತಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ರಾಮನಗರ, ಡಿಸೆಂಬರ್ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು ಹೇಳಿದ್ದ. ಆ ನಂತರ ಮೂವರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 18, 2025 01:44 PM
