Video: ಸಿಆರ್​​ಪಿಎಫ್​ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಸಾವು, 15 ಮಂದಿಗೆ ಗಾಯ

Updated on: Aug 07, 2025 | 12:28 PM

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್​ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್​) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಂತ್ ಘರ್‌ನಲ್ಲಿ ನಡೆದ ಕಾರ್ಯಾಚರಣೆಯಿಂದ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಉಧಂಪುರ, ಆಗಸ್ಟ್​ 07: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್​ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್​) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಂತ್ ಘರ್‌ನಲ್ಲಿ ನಡೆದ ಕಾರ್ಯಾಚರಣೆಯಿಂದ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಗುಂಡಿನ ದಾಳಿಗೆ ಒಳಗಾದ ವಾಹನವು ಪಡೆಯ 187 ನೇ ಬೆಟಾಲಿಯನ್‌ಗೆ ಸೇರಿತ್ತು. ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದರು, ಇತರ 16 ಮಂದಿ ಗಾಯಗೊಂಡರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದರು, ಇದರಿಂದಾಗಿ ಸಾವಿನ ಸಂಖ್ಯೆ ಮೂರಕ್ಕೆ ಏರಿತು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 07, 2025 12:26 PM