AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಥಾರ್-ಟಿಪ್ಪರ್ ಡಿಕ್ಕಿಯಾಗಿ ಮೂವರು ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಥಾರ್-ಟಿಪ್ಪರ್ ಡಿಕ್ಕಿಯಾಗಿ ಮೂವರು ಸಾವು

ದಿಲೀಪ್​, ಚೌಡಹಳ್ಳಿ
| Edited By: |

Updated on: Nov 28, 2026 | 2:01 PM

Share

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯ ಇಂಡುವಾಳು ಬಳಿ ಟಿಪ್ಪರ್‌ಗೆ ಥಾರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಾಹನ ತಪಾಸಣೆ ವೇಳೆ ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ, ನವೆಂಬರ್​​ 28: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯ ಇಂಡುವಾಳು ಗ್ರಾಮದ ಬಳಿ ಭೀಕರ ಅಪಘಾತಸಂಭವಿಸಿದ್ದು, ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಥಾರ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಕೇರಳ ಮೂಲದ ಲಿಫೈಲ್ ಹಾಗೂ ಮತ್ತೊಬ್ಬ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೇರಳ ಮೂಲದ ಬಾಸಿಲ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಗೆ ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More