ಕಾರ್ಕಳ ಬಳಿ ಭೀಕರ ರಸ್ತೆ ಅಪಘಾತ, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

Edited By:

Updated on: Dec 10, 2022 | 12:05 PM

ವೇಗವಾಗಿ ಬರುತ್ತ್ತಿದ್ದ ಖಾಸಗಿ ಬಸ್ಸೊಂದಕ್ಕೆ ಕಾರು ಗುದ್ದಿದ ಪರಿಣಾಮ ಕಾರಲ್ಲಿ ಪ್ರಯಾಣಿಸುತ್ತಿದ್ದ ನಾಗರಾಜು (40), ಪ್ರತ್ಯುಷಾ (32) ಪುಟ್ಟ ಮಗು ಬಲಿಯಾಗಿದ್ದಾರೆ.

ಶನಿವಾರ ಬೆಳಗ್ಗೆ ಉಡುಪಿ ಜಿಲ್ಲೆ ಕಾರ್ಕಳ (Karkala) ತಾಲ್ಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ (mishap) 2 ವರ್ಷದ ಒಂದು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬರುತ್ತ್ತಿದ್ದ ಖಾಸಗಿ ಬಸ್ಸೊಂದಕ್ಕೆ (private bus) ಕಾರು ಗುದ್ದಿದ ಪರಿಣಾಮ ಕಾರಲ್ಲಿ ಪ್ರಯಾಣಿಸುತ್ತಿದ್ದ ನಾಗರಾಜು (40), ಪ್ರತ್ಯುಷಾ (32) ಪುಟ್ಟ ಮಗು ಬಲಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕಾರ್ಕಳ ಪೊಲೀಸರು ಪ್ರಕರಣವವನ್ನು ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ