CET Results announced: ಇಂಜಿನಿಯರಿಂಗ್ ವಿಭಾಗದ ಮೊದಲ 5 ರ‍್ಯಾಂಕ್ ಪಡೆದವರಲ್ಲಿ 3 ವಿದ್ಯಾರ್ಥಿಗಳು ಬೆಂಗಳೂರಿನವರು

Updated on: Jun 15, 2023 | 12:11 PM

ಸಚಿವರು ಹೇಳುವ ಪ್ರಕಾರ ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ ಎಮ್ ಸಿ ಸುಧಾಕರ್ (Dr MC Sudhakar) ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮೇ 21 ಮತ್ತು 22 ರಂದು ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test) ಫಲಿತಾಂಶಗಳನ್ನು ಪ್ರಕಟಿಸಿದರು. ಸಚಿವರು ಹೇಳುವ ಪ್ರಕಾರ ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ನಟರಾಜ್ ಕುಮಾರ್, ಕುಮಾರನ್ ಚಿಲ್ಡ್ರನ್ಸ್ ಹೋಮ್, ಬೆಂಗಳೂರು ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಆರ್ ವಿ ಪಿಯು ಕಾಲೇಜ್ ಜಯನಗರ, ಬೆಂಗಳೂರು ಕಾಲೇಜಿನ ಅರ್ಜುನನ್ ಕೃಷ್ಣಸ್ವಾಮಿ ಎರಡನೇ ರ‍್ಯಾಂಕ್  ಗಿಟ್ಟಿಸಿದ್ದಾರೆ. ಈ ವಿಭಾಗದಲ್ಲಿ ಮೂರನೇ ರ‍್ಯಾಂಕ್ ಸುಮೇಧ್ ಶೆಟ್ಟಿ, ವಿದ್ಯಾನಿಕೇತನ್ ಪಿಯು ಕಾಲೇಜ್, ಹುಬ್ಬಳ್ಳಿ ಪಾಲಾಗಿದೆ. ಸುಮೇಧ್ ಎಸ್ ಎಸ್-ಜಿಂದಾಲ್ ವಿದ್ಯಾಮಂದಿರ ಟೌನ್ ಶಿಪ್, ತೋರಣ್ ಗಲ್ 4 ನೇ ರ‍್ಯಾಂಕ್ ಪಡೆದಿದ್ದರೆ, ಬೆಂಗಳೂರು ಮಾರತ್ ಹಳ್ಳಿಯಲ್ಲಿರುವ ನಾರಾಯಣ-ಈ ಕಾಲೇಜಿನ ಮಾಧವ ಸೂರ್ಯ ತಾಡೇಪಲ್ಲಿ 5 ನೇ ರ‍್ಯಾಂಕ್ ಗಿಟ್ಟಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 15, 2023 11:53 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More