Dharwad: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ
ಅಗ್ನಿ ಅವಘಡದಲ್ಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕೂಡಲೇ ಕಾರ್ಯಪ್ರವರ್ತರಾದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ.
ಧಾರವಾಡ, ಜನವರಿ 06: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

