ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್ ಎಚ್ಚರಿಕೆ
ಕಾಲಿವುಡ್ ನಟ ಕಮಲ್ ಹಾಸನ್ ಅವರ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ಹೇಳಿಕೆ ನೀಡುವ ಮೂಲಕ ಕಮಲ್ ಹಾಸನ್ ತಪ್ಪು ಮಾಡಿದ್ದಾರೆ. ಆ ತಪ್ಪನ್ನು ಒಪ್ಪಿಕೊಂಡು ಅವರು ಕ್ಷಮೆ ಕೇಳಲೇಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ನಟ ಕಮಲ್ ಹಾಸನ್ (Kamal Haasan) ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಗುಡುಗಿದ್ದಾರೆ. ‘ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡುವ ಮೂಲಕ ಕಮಲ್ ಹಾಸನ್ ತಪ್ಪು ಮಾಡಿದ್ದಾರೆ. ಆ ತಪ್ಪನ್ನು ಒಪ್ಪಿಕೊಂಡು ಅವರು ಕ್ಷಮೆ ಕೇಳಲೇಬೇಕು, ಕಮಲ್ ಹಾಸನ್ ಮಾತಿಗೆ ಪುರಾವೆ ಇಲ್ಲ. ಮಾತನಾಡುವಾಗ ಜವಾಬ್ದಾರಿಯಿಂದ ಮಾತನಾಡಬೇಕು’ ಎಂದು ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ. ‘ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆದರೆ ಹೋರಾಟ ಮಾಡುವುದು ಅನಿವಾರ್ಯ. ಚಿತ್ರಮಂದಿರದವರು ಮತ್ತು ಹಂಚಿಕೆದಾರರು ಈ ಸಿನಿಮಾವನ್ನು ತೆಗೆದುಕೊಳ್ಳಬಾರದು’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos