‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
Thug Life Movie: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದೇ ಇರುವಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ಪ್ರಮುಖವಾದುದು.ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವೇ ಭದ್ರತೆ ನೀಡಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಬೇಕಿದೆ. ಇದೀಗ ಕನ್ನಡಪರ ಸಂಘಟನೆ ಮುಖಂಡ ಪ್ರವೀಣ್ ಶೆಟ್ಟಿ ಚಿತ್ರಮಂದಿರಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದೇ ಇರುವಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ಪ್ರಮುಖವಾದುದು. ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ನಾರಾಯಣಗೌಡ ಅವರು ಸಿನಿಮಾ ಬಿಡುಗಡೆ ಆದರೆ ಚಿತ್ರಮಂದಿರಗಳಿಗೆ ಬೆಂಕಿ ಇಡುತ್ತೇವೆ ಎಂದಿದ್ದರು. ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವೇ ಭದ್ರತೆ ನೀಡಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಬೇಕಿದೆ. ಇದೀಗ ಕನ್ನಡಪರ ಸಂಘಟನೆ ಮುಖಂಡ ಪ್ರವೀಣ್ ಶೆಟ್ಟಿ ವಿಡಿಯೋ ಬಿಡುಗಡೆ ಮಾಡಿದ್ದು, ‘ಥಗ್ ಲೈಫ್’ ಬಿಡುಗಡೆ ಆದರೆ ಕನ್ನಡಪರ ಸಂಘಟನೆಗಳ ಸದಸ್ಯರು ಟಿಕೆಟ್ ಖರೀದಿ ಮಾಡಿ ಚಿತ್ರಮಂದಿರಕ್ಕೆ ಹೋಗುತ್ತೇವೆ’ ಎಂದಿದ್ದಾರೆ. ಆ ಮೂಲಕ ಚಿತ್ರಮಂದಿರದ ಒಳಗೆ ಏನು ನಡೆಯುತ್ತದೆಯೋ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ