Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕಾರ್ತಿಕ ಮಾಸದ ಗುರುವಾರ ನವೆಂಬರ್ 21 ರಂದು ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ಡಾ. ಬಸವರಾಜ್ ಗುರೂಜಿ ಅವರು ತಿಳಿಸಿದ್ದಾರೆ.
ಒಬ್ಬ ಮನುಷ್ಯ ಹುಟ್ಟಿದ ಕ್ಷಣದಿಂದ ಹಿಡಿದು ಆತ ಸಾಯುವ ಕ್ಷಣದವರೆಗೆ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗತಿಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನದಲ್ಲಿ ಋಣಾತ್ಮಕ ಪರಿಣಾಮಗಳು ಉಂಟುಮಾಡಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್ 21 ಗುರುವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶುಕ್ಲ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 13:44 ರಿಂದ 15:09ರವರೆಗೆ, ಯಮಘಂಡ ಕಾಲ ಬೆಳಗ್ಗೆ 06:38 ರಿಂದ ಬೆಳಗ್ಗೆ 08:03ರವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ ಬೆಳಗ್ಗೆ 10:53 ರವರೆಗೆ.