Amit Shah in Karnataka: ಕಟೌಟ್ ಮತ್ತು ಫ್ಲೆಕ್ಸ್ ಗಳ ಮೂಲಕ ಅಮಿತ್ ಶಾ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಟಿಕೆಟ್ ಆಕಾಂಕ್ಷಿಗಳು!

Updated on: Jan 28, 2023 | 12:03 PM

ಕೇಂದ್ರ ಸಚಿವ ಅವುಗಳನ್ನು ನೋಡುತ್ತಾರೋ, ನೋಡಿದರೂ ಅವರಿಗೆ ನಾಯಕರ ಹೆಸರುಗಳು ನೆನಪಿರುತ್ತವೋ ಅನ್ನೋದು ನಿಮ್ಮ ಊಹೆಗೆ ಬಿಟ್ಟ ವಿಚಾರ.

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಧ್ಯಾಹ್ನ 3 ಗಂಟೆಗೆ ಬೆಳಗಾವಿ (Belagavi) ಜಿಲ್ಲೆಯ ಎಮ್ ಕೆ ಹುಬ್ಬಳ್ಳಿ ಗ್ರಾಮದಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಯಾತ್ರೆಯ (Janasankalpa Yatre) ಬೃಹತ್ ಸಮಾವೇಶದಲ್ಲಿ ಮಾತಾಡಲಿದ್ದಾರೆ. ಇದು ಚುನಾವಣಾ ತಯಾರಿಯ ಭಾಗವಾಗಿರುವುದರಿಂದ ಈ ಭಾಗದ ಟಿಕೆಟ್ ಆಕಾಂಕ್ಷಿಗಳು ಅಮಿತ್ ಶಾ ಅವರಿಗೆ ಸ್ವಾಗತ ಕೋರುತ್ತಾ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಹಾಕಿಸಿದ್ದಾರೆ. ಜನಸಂಕಲ್ಪ ಯಾತ್ರೆಯಲ್ಲಿ ಬ್ಯಾನರ್, ಕಟೌಟ್ ಗಳ ಮೂಲಕ ಅಮಿತ್ ಶಾ ಅವರ ಗಮನ ಸೆಳೆಯುವ ಸಂಕಲ್ಪ ಈ ನಾಯಕರದ್ದು. ಕೇಂದ್ರ ಸಚಿವ ಅವುಗಳನ್ನು ನೋಡುತ್ತಾರೋ, ನೋಡಿದರೂ ಅವರಿಗೆ ನಾಯಕರ ಹೆಸರುಗಳು ನೆನಪಿರುತ್ತವೋ ಅನ್ನೋದು ನಿಮ್ಮ ಊಹೆಗೆ ಬಿಟ್ಟ ವಿಚಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2023 12:02 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More