ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ: ವಿಡಿಯೋ ನೋಡಿ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯ ಜೀವಿ ಸಂಘರ್ಷ ಮುಂದುವರಿದಿರುವ ಬೆನ್ನಲ್ಲೇ ಬಿಳಿಗಿರಿರಂಗನಬೆಟ್ಟದ ಬಳಿ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು ಹಾಗೂ ಹುಲಿ ಸಂಚರಿಸುತ್ತಿರುವ ದೃಶ್ಯ ಕಂಡುಬಂದಿದೆ. ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ.
ಚಾಮರಾಜನಗರ, ಡಿಸೆಂಬರ್ 18: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು ಹಾಗೂ ಮತ್ತೊಂದೆಡೆ ಹುಲಿ ಸಂಚಾರ ಕಂಡುಬಂದಿದೆ. ಆನೆಗಳ ಹಿಂಡು ಹಾಗೂ ಹುಲಿ ರಸ್ತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊಬೈಲ್ ಕ್ಯಾಮರದಲ್ಲಿ ಸೆರೆಯಾದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ