AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದ ಯುವಕ: ಭೀತಿ ಮೂಡಿಸಿದ್ದ ವ್ಯಾಘ್ರ ಕೊನೆಗೂ ಬಲೆಗೆ

ಹುಲಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದ ಯುವಕ: ಭೀತಿ ಮೂಡಿಸಿದ್ದ ವ್ಯಾಘ್ರ ಕೊನೆಗೂ ಬಲೆಗೆ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 26, 2026 | 11:49 AM

Share

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯಲ್ಲಿ ಭೀತಿ ಸೃಷ್ಟಿಸಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಪತ್ತೆಹಚ್ಚಿದ ವ್ಯಾಘ್ರನನ್ನು ರಾತ್ರಿ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಯಿತು. ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆಯ ತ್ವರಿತ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ, ಆ.26: ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಸೆರೆಹಿಡಿದಿದ್ದಾರೆ. ಮದ್ದೂರು ಕಾಲೋನಿಯ ಚೆಂಡುಮಲ್ಲಿಗೆ ಜಮೀನಿನಲ್ಲಿ ಬೀಡುಬಿಟ್ಟಿದ್ದ ಈ ವ್ಯಾಘ್ರವನ್ನು ಪತ್ತೆಹಚ್ಚಲು ಬಂಡೀಪುರ ಅರಣ್ಯಾಧಿಕಾರಿಗಳು ಡ್ರೋನ್ ಕ್ಯಾಮೆರಾಗಳನ್ನು ಬಳಸಿ ತೀವ್ರ ಶೋಧ ನಡೆಸಿದ್ದರು. ಸತತ ಕಾರ್ಯಾಚರಣೆಯ ನಂತರ ಹುಲಿಯನ್ನು ಯಶಸ್ವಿಯಾಗಿ ಬಲೆಗೆ ಕೆಡವಲಾಗಿದ್ದು, ಸದಾ ಭೀತಿಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಮದ್ದೂರು ಗ್ರಾಮದ ಯುವಕ ರಾಜೇಂದ್ರ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೂಗಳತೆ ಅಂತರದಲ್ಲಿ ಹುಲಿ ಪ್ರತ್ಯಕ್ಷವಾಗಿತ್ತು. ಹತ್ತಿರದಲ್ಲೇ ವ್ಯಾಘ್ರನನ್ನು ಕಂಡು ಬೆಚ್ಚಿಬಿದ್ದ ಯುವಕ ತಕ್ಷಣವೇ ಪ್ರಾಣಭಯದಿಂದ ಗ್ರಾಮದ ಕಡೆಗೆ ಓಡಿಬಂದು ಬಚಾವ್ ಆಗಿದ್ದರು. ಕೂಡಲೇ ಜಾಗೃತರಾದ ಮದ್ದೂರು ಗ್ರಾಮಸ್ಥರು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅಧಿಕಾರಿಗಳ ತಂಡ, ಡ್ರೋನ್ ಕ್ಯಾಮೆರಾ ಮೂಲಕ ಹುಲಿಯ ಚಲನವಲನಗಳನ್ನು ನಿಖರವಾಗಿ ಪತ್ತೆಹಚ್ಚಿ, ರಾತ್ರಿ ವೇಳೆ ಸುದೀರ್ಘ ಕಾರ್ಯಾಚರಣೆ ನಡೆಸಿ ಹುಲಿಯನ್ನು ಕಾರ್ಯಾಚರಣೆಯಲ್ಲಿ ಬಂಧಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us