AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅಬ್ಬಬ್ಬಾ., ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿರಾಯ, ಎದೆ ಝಲ್ ಎನ್ನುವ ವಿಡಿಯೋ ವೈರಲ್

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಆಯೇಷಾ ಬಾನು
|

Updated on:Apr 04, 2023 | 8:15 AM

Share

ಮೈಸೂರು: ಒಂದು ಕ್ಷಣ ಎದೆ ಧಗ್ ಎನ್ನುವ ದೃಶ್ಯ. ಸಾಮಾನ್ಯವಾಗಿ ಸಫಾರಿಗೆ ಹೋಗುವವರಿಗೆ ಹುಲಿ, ಆನೆ, ಸಿಂಹ ಸೇರಿದಂತೆ ಕಾಡು ಪ್ರಾಣಿಗಳನ್ನು ಹತ್ತಿರದಿಂದ ನೋಡುವ ಚಾನ್ಸ್ ಸಿಗುತ್ತೆ. ಹಾಗೂ ಕೆಲವೊಮ್ಮೆ ಆ ಪ್ರಾಣಿಗಳು ಅಟ್ಟಾಡಿಸಿಕೊಂಡು ಬರುವುದು, ಅಥವಾ ಭೇಟೆಗಾಗಿ ಮತ್ತೊಂದು ಪ್ರಾಣಿಯನ್ನು ಕೊಲ್ಲುವುದನ್ನು ಪ್ರವಾಸಿಗರು ನೋಡಿರುತ್ತಾರೆ. ಅದೇ ರೀತಿ ಸಫಾರಿಗೆ ಹೋಗಿದ್ದ ಮಂದಿಗೆ ಹುಲಿ ಕಾಡೆಮ್ಮೆಯನ್ನು ಚೇಸ್ ಮಾಡಿದ ಭಯಾನಕ ದೃಶ್ಯ ಹತ್ತಿರದಿಂದ ನೋಡುವ ಅವಕಾಶ ಸಿಕ್ಕಿದೆ. ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ.

ಬೇಟೆಗಾಗಿ ಹುಲಿಯೊಂದು ಕಾಡೆಮ್ಮೆಯನ್ನು ಬೆನ್ನಟ್ಟಿದ್ದು ನಡುಕ ಹುಟ್ಟಿಸುವ ಅಪರೂಪದ ಚೇಸಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನಿಂದ ಸಫಾರಿ ರಸ್ತೆವರೆಗೂ ಹುಲಿ ಕಾಡೆಮ್ಮೆಯನ್ನು ಬೆನ್ನಟ್ಟಿ ಬಂದಿದೆ. ಆದ್ರೆ ಕ್ರೂರ ಮೃಗದ ಕೈಗೆ ಸಿಗದೆ ಚಾಕಚಕ್ಯತೆಯಿಂದ ಕಾಡೆಮ್ಮೆ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದೆ. ಬೇಟೆ ಸಿಗದ ಹುಲಿ ನಿರಾಶೆಯಿಂದ ಕಾಡಿಗೆ ಮರಳಿದೆ. ಸಫಾರಿಗೆ ಹೋದವರ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ.

Published On - 8:15 am, Tue, 4 April 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್