AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 21, 2026 | 2:29 PM

Share

ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹತ್ತಿರದ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಸಂಚಾರ ಕಂಡುಬಂದಿದೆ. ಹುಲಿ ಓಡಾಟದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರವಾಸಿಗರು ಆತಂಕಕ್ಕೀಡಾಗಿದ್ದು, ಅರಣ್ಯ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More