AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ದೆಹಲಿ-ಪಂಜಾಬ್ ನೆಟ್‌ವರ್ಕ್, ಬಿಷ್ಣೋಯ್ ಗ್ಯಾಂಗ್ ಕೈವಾಡದ ಬಗ್ಗೆ ತನಿಖೆ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ದೆಹಲಿ-ಪಂಜಾಬ್ ನೆಟ್‌ವರ್ಕ್, ಬಿಷ್ಣೋಯ್ ಗ್ಯಾಂಗ್ ಕೈವಾಡದ ಬಗ್ಗೆ ತನಿಖೆ

ನಯನಾ ರಾಜೀವ್
|

Updated on: Oct 19, 2026 | 12:33 PM

Share

ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಅವರ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್ ಚುರುಕುಗೊಳಿಸಿದೆ. ದೆಹಲಿ-ಪಂಜಾಬ್ ನೆಟ್‌ವರ್ಕ್‌ನಿಂದ ಕೃತ್ಯ ನಡೆದಿದ್ದು, ಬಿಷ್ಣೋಯ್ ಗ್ಯಾಂಗ್‌ನ ಕೈವಾಡದ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಮೂವರು ಶೂಟರ್‌ಗಳ ಪತ್ತೆಗೆ 17 ತಂಡಗಳು ಕಾರ್ಯಪ್ರವೃತ್ತವಾಗಿವೆ. ಗನ್ ಜಾಮ್ ಆದ ಕಾರಣ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬೈ, ಅಕ್ಟೋಬರ್ 19: ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಂಬೈ ಕ್ರೈಂ ಬ್ರಾಂಚ್ ತನಿಖೆಯನ್ನು ಚುರುಕುಗೊಳಿಸಿದೆ. ಈ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದ್ದು, 17 ತಂಡಗಳನ್ನು ರಚಿಸಿ ಶೂಟರ್‌ಗಳ ಪತ್ತೆಗೆ ಬಲೆ ಬೀಸಲಾಗಿದೆ.

ಮೂವರು ಶೂಟರ್‌ಗಳು ಪಲ್ಸರ್ ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದು, ಗುಂಡಿನ ದಾಳಿಯ ಸಂದರ್ಭದಲ್ಲಿ ಗನ್ ಜಾಮ್ ಆದ ಕಾರಣ ಕೇವಲ ಐದು ಸುತ್ತು ಗುಂಡು ಹಾರಿಸಲು ಸಾಧ್ಯವಾಗಿದೆ. ಇದರಿಂದ ಟೈಗರ್ ಶ್ರಾಫ್ ದೊಡ್ಡ ಅಪಾಯದಿಂದ ಪಾರಾಗಿದ್ದು, ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಟ ಟೈಗರ್ ಶ್ರಾಫ್ ಅವರ ಮೈಮೇಲೆ ಗನ್‌ಪೌಡರ್‌ನಿಂದ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ದಾಳಿಯ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸಲ್ಮಾನ್ ಖಾನ್ ಜೊತೆ ಕೆಲಸ ಮಾಡಿದವರಿಗೆ ಎಚ್ಚರಿಕೆ ನೀಡಿದ್ದೇವೆ ಎಂದು ಹೇಳಿ ಅನಿಲ್ ಪಂಡಿತ್ ಎಂಬ ವ್ಯಕ್ತಿಯೊಬ್ಬ ಆಡಿಯೋ ಬಿಡುಗಡೆ ಮಾಡಿದ್ದಾನೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ದಾಳಿಕೋರರನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಮೂವರನ್ನು ವಶಕ್ಕೆ ಪಡೆಯಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More