AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಫಾರಿಗೆ ತೆರಳಿದ್ದವರಿಗೆ ದರ್ಶನ ಕೊಟ್ಟ ಬೃಹತ್ ವ್ಯಾಘ್ರ: ಹೆಬ್ಬುಲಿ ವಿಡಿಯೋ ಇಲ್ಲಿದೆ ನೋಡಿ

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಫಾರಿಗೆ ತೆರಳಿದ್ದವರಿಗೆ ದರ್ಶನ ಕೊಟ್ಟ ಬೃಹತ್ ವ್ಯಾಘ್ರ: ಹೆಬ್ಬುಲಿ ವಿಡಿಯೋ ಇಲ್ಲಿದೆ ನೋಡಿ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:May 06, 2026 | 9:10 AM

Share

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಬೃಹತ್ ಹುಲಿಯೊಂದು ದರ್ಶನ ನೀಡಿದೆ. ಹತ್ತಿರದಲ್ಲೇ ಕಾಣಿಸಿಕೊಂಡ ಭಾರಿ ಗಾತ್ರದ ಹುಲಿಯನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದು, ಮೊಬೈಲ್ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಚಾಮರಾಜನಗರ, ಮೇ 6: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನ ಬೆಟ್ಟದಲ್ಲಿ (BRT) ಪ್ರವಾಸಿಗರಿಗೆ ಅದೃಷ್ಟವೋ ಎಂಬಂತೆ ಬೃಹತ್ ಗಾತ್ರದ ಹೆಬ್ಬುಲಿಯೊಂದು ದರ್ಶನ ನೀಡಿದೆ. ಯಳಂದೂರು ತಾಲೂಕಿನ ಕೆ.ಗುಡಿ ಅರಣ್ಯ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ವಾಹನ ತೆರಳುತ್ತಿದ್ದಾಗ, ಪೊದೆಗಳ ನಡುವಿನಿಂದ ಬಂದ ಹುಲಿ ರಸ್ತೆಯಲ್ಲೇ ಕೆಲಕಾಲ ವಿಹರಿಸಿದೆ. ಪ್ರವಾಸಿಗರು ಅತಿ ಸಮೀಪದಿಂದ ಹುಲಿಯನ್ನು ಕಂಡು ಬೆರಗಾಗಿದ್ದಾರೆ. ಸಾಮಾನ್ಯವಾಗಿ ಹುಲಿಗಳು ಮನುಷ್ಯರ ವಾಹನ ಕಂಡ ತಕ್ಷಣ ಕಾಡಿನೊಳಗೆ ಓಡಿಹೋಗುತ್ತವೆ, ಆದರೆ ಈ ಹುಲಿ ಮಾತ್ರ ಸಫಾರಿಗರಿಗೆ ದರ್ಶನ ನೀಡಿ, ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ನಂತರ ನಿಧಾನವಾಗಿ ಕಾಡಿನೊಳಗೆ ಮಾಯವಾಗಿದೆ.

ಇತ್ತೀಚೆಗೆ ಬಿಳಿಗಿರಿರಂಗನ ಬೆಟ್ಟ ಹಾಗೂ ಮಲೆ ಮಹದೇಶ್ವರ ವನ್ಯಧಾಮಗಳಲ್ಲಿ ಹುಲಿಗಳ ಸಂಖ್ಯೆ ವೃದ್ಧಿಯಾಗಿದ್ದು, ಪ್ರವಾಸಿಗರಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದು ವನ್ಯಜೀವಿ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 06, 2026 09:05 AM
Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More