ನಾಳೆ ಹಾಸನದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸಮಾವೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 04, 2024 | 4:01 PM

ಸಮಾವೇಶದಲ್ಲಿ ಪಾಲ್ಗೊಳ್ಳಲು ಹಾಸನವಲ್ಲದೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಿಂದ ಜನ ಮತ್ತು ಕಾರ್ಯಕರ್ತರು ಅಗಮಿಸುತ್ತಿದ್ದಾರೆ. ಹಾಸನ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತು, ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ಸಂಸದರಾಗಿ ಅಯ್ಕೆಯಾದರು.

ಹಾಸನ: ನಗರದ ಎಸ್ಎಂ ಕೃಷ್ಣ ಕ್ರೀಡಾಂಗಣದಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಬೃಹತ್ ಜನಕಲ್ಯಾಣ ಸಮಾವೇಶ ನಡೆಯಲಿದ್ದು ಅಂತಿಮ ಹಂತದ ತಯಾರಿಗಳು ನಡೆಯುತ್ತಿವೆ. ಸರಕಾರದ ಪ್ರಮುಖ ಪ್ರತಿನಿಧಿಗಳೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಸುಮಾರು 2 ಲಕ್ಷ ಜನ ಕೂಡ ಸೇರುವ ನಿರೀಕ್ಷೆಯಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಭದ್ರತೆಗಾಗಿ 5 ಎಸ್​ಪಿ, 6 ಹೆಚ್ಚುವರಿ ಎಸ್​ಪಿ, 12 ಡಿವೈಎಸ್​ಪಿ, 40 ಇನ್​ಪೆಕ್ಟರ್ ಮತ್ತು 80 ಪಿಎಸ್ಐಗಳನ್ನು ಒಳಗೊಂಡ ಸುಮಾರು 2,000 ಪೊಲೀಸರನ್ನು ನಿಯೋಜಿಸಲಾಗಿದೆ. ಪಕ್ಕದ ಜಿಲ್ಲೆಗಳಾದ ಮಂಡ್ಯ, ಮೈಸೂರು ಕೊಡಗು ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲವನ್ನು ತರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹಾಸನ ಕಾಂಗ್ರೆಸ್ ಕಾರ್ಯಕ್ರಮದ ದಿಕ್ಕೇ ಬದಲು: ಸ್ವಾಭಿಮಾನಿ ಅಲ್ಲ ಜನಕಲ್ಯಾಣ ಸಮಾವೇಶ ಎಂದ ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.