ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನಾ ರ‍್ಯಾಲಿ, ಫ್ರೀಡಂ ಪಾರ್ಕ್ ಸುತ್ತಮುತ್ತ ಬಿಗಿ ಬಂದೋಬಸ್ತ್
ಪ್ರತಿಭಟನಾ ರ‍್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅನೇಕ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ರ‍್ಯಾಲಿ ಶುರುವಾದ ಬಳಿಕ ಫ್ರೀಡಂ ಪಾರ್ಕ್ ಮುಂದಿನ ರಸ್ತೆಯಲ್ಲಿ ಸಂಚಾರ ಬಂದ್ ಆಗಲಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಜೂನ್ ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತದಂಥ ಘಟನೆ ಮರುಕಳಿಸದಿರಲು ಎಲ್ಲ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಬೆಂಗಳೂರು, ಆಗಸ್ಟ್ 8: ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ (protest rally) ನಡೆಸಲಿದ್ದು ಪಾರ್ಕ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಮ್ಮ ಬೆಂಗಳೂರು ವರದಿಗಾರ ಹೇಳುವ ಹಾಗೆ ಸುಮಾರು 6,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಮತಕ್ಷೇತ್ರದ ಭಾಗವಾಗಿರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆಯೆಂದು ರಾಹುಲ್ ಗಾಂಧಿ ಅರೋಪಿಸಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ನಾಳೆ ಆಟಂ ಬಾಬ್ ಸಿಡಿಸಲಿದ್ದಾರೆ: ಶಿವರಾಜ್ ತಂಗಡಿಗಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

