AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ!

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ!

ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: May 22, 2026 | 8:17 AM

Share

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅಚ್ಚರಿಯೊಂದು ಕಾದಿತ್ತು. ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಬೃಹತ್ ಹೆಣ್ಣು ಹುಲಿಯೊಂದು ರಾಜಗಾಂಭೀರ್ಯದಿಂದ ದರ್ಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪಿಜಿ ಪಾಳ್ಯ ಸಫಾರಿಯಲ್ಲಿ ಈ ಹೆಣ್ಣುಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಚಾಮರಾಜನಗರ, ಮೇ 22: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅಚ್ಚರಿಯೊಂದು ಕಾದಿತ್ತು. ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಬೃಹತ್ ಹೆಣ್ಣು ಹುಲಿಯೊಂದು ರಾಜಗಾಂಭೀರ್ಯದಿಂದ ದರ್ಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪಿಜಿ ಪಾಳ್ಯ ಸಫಾರಿಯಲ್ಲಿ ಈ ಹೆಣ್ಣುಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ವ್ಯಾಘ್ರ ಮುಕ್ತವಾಗಿ ಸಂಚರಿಸುತ್ತಿರುವ ಈ ಅಪರೂಪದ ದೃಶ್ಯವನ್ನು ಹವ್ಯಾಸಿ ಛಾಯಗ್ರಾಹಕ ಹೇಮಂತ್ ಕುಮಾರ್ ಅವರು ತಮ್ಮ ಕ್ಯಾಮರಾದಲ್ಲಿ ಅತ್ಯಂತ ಸುಂದರವಾಗಿ ಸೆರೆಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿಜಿ ಪಾಳ್ಯ ಕೇಂದ್ರದಲ್ಲಿ ಸೆರೆಯಾದ ಈ ವೀಡಿಯೋ ಝಲಕ್, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ವನ್ಯಜೀವಿ ಪ್ರೇಮಿಗಳ ದಿಲ್ ಖುಷ್ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More