ರಣರೋಚಕ ಹೋರಾಟದಲ್ಲಿ ಗೆಲುವಿನ ತಿಲಕವಿಟ್ಟ ತಿಲಕ್ ವರ್ಮಾ… ಸಂಭ್ರಮ ಹೀಗಿತ್ತು ನೋಡಿ
IND vs ENG 2nd T20: ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಈ ಗೆಲುವಿನ ಬಳಿಕ ತಿಲಕ್ ವರ್ಮಾ ಗಾಳಿಯಲ್ಲಿ ಪಂಚ್ ಮಾಡಿ ಸಂಭ್ರಮಿಸುತ್ತಿದ್ದಂತೆ ಇತ್ತ ಸ್ಟೇಡಿಯಂನಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ಪಡೆದುಕೊಳ್ಳುತ್ತಿವೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ. 146 ರನ್ಗಳಿಗೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡಿದ್ದರೂ ತಿಲಕ್ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ್ದರು. ಅದರಲ್ಲೂ ಕೊನೆಯ ಓವರ್ನಲ್ಲಿ ಭಾರತ ತಂಡಕ್ಕೆ ಗೆಲ್ಲಲು 6 ರನ್ಗಳ ಅವಶ್ಯಕತೆಯಿತ್ತು.
ಈ ಹಂತದಲ್ಲಿ ಎಲ್ಲಾ ಒತ್ತಡಗಳನ್ನು ಮೆಟ್ಟಿ ನಿಂತ ತಿಲಕ್, ಮೊದಲ ಎಸೆತದಲ್ಲಿ 2 ರನ್ ಕಲೆಹಾಕಿ, ಮರು ಎಸೆತದಲ್ಲಿ ಫೋರ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಈ ಗೆಲುವಿನ ಬಳಿಕ ತಿಲಕ್ ವರ್ಮಾ ಗಾಳಿಯಲ್ಲಿ ಪಂಚ್ ಮಾಡಿ ಸಂಭ್ರಮಿಸುತ್ತಿದ್ದಂತೆ ಇತ್ತ ಸ್ಟೇಡಿಯಂನಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ಪಡೆದುಕೊಳ್ಳುತ್ತಿವೆ.
ಇನ್ನು ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿ 5 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 72 ರನ್ ಬಾರಿಸಿ ಟೀಮ್ ಇಂಡಿಯಾ ಗೆಲುವಿಗೆ ಕಾರಣಕರ್ತರಾದ ತಿಲಕ್ ವರ್ಮಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ಸಂಕ್ಷಿಪ್ತ ಸ್ಕೋರ್ ವಿವರ:
ಇಂಗ್ಲೆಂಡ್– 165/9 (20)
ಜೋಸ್ ಬಟ್ಲರ್ (45), ಬ್ರೈಡನ್ ಕಾರ್ಸ್ (31)
ಭಾರತ- 166/8 (19.2)
ತಿಲಕ್ ವರ್ಮಾ (72), ವಾಷಿಂಗ್ಟನ್ ಸುಂದರ್ (26).