Asia Cup 2025: ಏಷ್ಯಾಕಪ್ ಗೆಲ್ಲಿಸಿಕೊಟ್ಟ ತಿಲಕ್ ವರ್ಮಾಗೆ ಭಾರತದಲ್ಲಿ ಭವ್ಯ ಸ್ವಾಗತ; ವಿಡಿಯೋ ನೋಡಿ

Updated on: Sep 29, 2025 | 11:24 PM

Tilak Varma's Triumphant Return: ಭಾರತ ತಂಡ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಗೆಲುವಿನಲ್ಲಿ ಯುವ ಬ್ಯಾಟರ್ ತಿಲಕ್ ವರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ದುಬೈನಿಂದ ಹೈದರಾಬಾದ್‌ಗೆ ಹಿಂದಿರುಗಿದ ತಿಲಕ್‌ಗೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.

ಭಾರತ ತಂಡ ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ 9ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಈ ಐತಿಹಾಸಿಕ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದ್ದ ಯುವ ಬ್ಯಾಟರ್ ತಿಲಕ್ ವರ್ಮಾ, ಸೋಮವಾರದಂದು ಭಾರತಕ್ಕೆ ಹಿಂದಿರುಗಿದ್ದಾರೆ. ದುಬೈನಿಂದ ನೇರವಾಗಿ ಹೈದರಾಬಾದ್‌ಗೆ ಬಂದಿಳಿದ ತಿಲಕ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದರು.

ಪಾಕಿಸ್ತಾನ ನೀಡಿದ 147 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕಳಪೆ ಆರಂಭವನ್ನು ಪಡೆಯಿತು. ಕೇವಲ 10 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಬಳಿಕ ಕೇವಲ 20 ರನ್‌ಗಳಿಗೆ ತನ್ನ ಮೂರನೇ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಅವರೊಂದಿಗೆ 57 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ನಂತರ ತಿಲಕ್, ಶಿವಂ ದುಬೆ ಜೊತೆಗೂಡಿ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದರು. ತಿಲಕ್ ವರ್ಮಾ 41 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು, ಇದು ಪಂದ್ಯಾವಳಿಯಲ್ಲಿ ಅವರ ಮೊದಲ ಅರ್ಧಶತಕವಾಗಿತ್ತು. ಅಂತಿಮವಾಗಿ ತಿಲಕ್ 53 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 69 ರನ್ ಗಳಿಸಿ ಅಜೇಯರಾಗಿ ಉಳಿದರು.

Published on: Sep 29, 2025 11:07 PM