ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ

Updated on: May 15, 2026 | 8:44 AM

ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದವು. ಪಂದ್ಯದ ಅಂತಿಮ ಹಂತದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್‌ಗಳಾದ ತಿಲಕ್ ವರ್ಮಾ ಮತ್ತು ವಿಲ್ ಜಾಕ್ಸ್ ಪಂಜಾಬ್ ಬೌಲರ್‌ಗಳ ವಿರುದ್ಧ ಅಕ್ಷರಶಃ ಸವಾರಿ ಮಾಡಿದರು. ಈ ಮೂಲಕ ಗೆಲುವು ಕಂಡರು

ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ ಗೆದ್ದಿದೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಿಕ್ಕಿದೆ. 4 ಓವರ್​​ಗೆ 52 ರನ್ ಬೇಕಿತ್ತು. ತಿಲಕ್ ವರ್ಮ ಜವಾಬ್ದರಿಯುತ ಆಟ ಆಡಿದರು. 11 ಎಸೆತಗಳಲ್ಲಿ 22 ರನ್ ಬೇಕಿದ್ದಾಗ ಇಡೀ ಮೈದಾನ ‘ಮುಂಬೈ.. ಮುಂಬೈ..’ ಎನ್ನುವ ಘೋಷಣೆಯಿಂದ ಮೊಳಗುತ್ತಿತ್ತು. ತಿಲಕ್ ವರ್ಮಾ 33 ಎಸೆತಗಳಲ್ಲಿ 75 ರನ್ ಬಾರಿಸಿದರು. ಕೊನೆಯ ಓವರ್​​ನಲ್ಲಿ 3 ಸಿಕ್ಸರ್​​ಗಳು ಬಂದವು. ಗೆಲುವಿನ ಬಳಿಕ ವರ್ಮ ಅವರು 45 ಎಂದು ತೋರಿಸುವ ಮೂಲಕ ರೋಹಿತ್ ಶರ್ಮಾ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More