ಫಿಲ್ ಸಾಲ್ಟ್, ಟಿಮ್ ಡೇವಿಡ್ ಸಿಡಿಲಬ್ಬರ: ಎದುರಾಳಿ ಪಡೆ ತತ್ತರ
Ajman Titans vs UAE Bulls: 163 ರನ್ಗಳ ಕಠಿಣ ಗುರಿ ಬೆನ್ನತ್ತಿದ ಅಜ್ಮಾನ್ ಟೈಟಾನ್ಸ್ ಪರ ಅಲೆಕ್ಸ್ ಹೇಲ್ಸ್ 18 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 10 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 115 ರನ್ಗಳಿಸಲಷ್ಟೇ ಶಕ್ತರಾದರು.
ಅಬುಧಾಬಿಯಲ್ಲಿ ನಡೆಯುತ್ತಿರುವ ಟಿ10 ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಯುಎಇ ಬುಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟಿಮ್ ಡೇವಿಡ್ ಹಾಗೂ ಫಿಲ್ ಸಾಲ್ಟ್. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಅಜ್ಮಾನ್ ಟೈಟಾನ್ಸ್ ತಂಡದ ನಾಯಕ ಮೊಯೀನ್ ಅಲಿ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಯುಎಇ ಬುಲ್ಸ್ ತಂಡಕ್ಕೆ ಫಿಲ್ ಸಾಲ್ಟ್ ಸಿಡಿಲಬ್ಬರದ ಆರಂಭ ಒದಗಿಸಿದರು. ಕೇವಲ 26 ಎಸೆತಗಳನ್ನು ಎದುರಿಸಿದ ಸಾಲ್ಟ್ 7 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 59 ರನ್ ಚಚ್ಚಿದರು.
ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಿಮ್ ಡೇವಿಡ್ ಕೇವಲ 13 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 1 ಫೋರ್ನೊಂದಿಗೆ 40 ರನ್ ಬಾರಿಸಿದರು. ಈ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಯುಎಇ ಬುಲ್ಸ್ ತಂಡವು 10 ಓವರ್ಗಳಲ್ಲಿ ಬರೋಬ್ಬರಿ 162 ರನ್ ಕಲೆಹಾಕಿತು.
ಈ ಕಠಿಣ ಗುರಿ ಬೆನ್ನತ್ತಿದ ಅಜ್ಮಾನ್ ಟೈಟಾನ್ಸ್ ಪರ ಅಲೆಕ್ಸ್ ಹೇಲ್ಸ್ 18 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 10 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 115 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಯುಎಇ ಬುಲ್ಸ್ ತಂಡವು 47 ರನ್ಗಳ ಭರ್ಜರಿ ಜಯ ಸಾಧಿಸಿ ಕ್ವಾಲಿಫೈಯರ್-2 ಗೆ ಅರ್ಹತೆ ಪಡೆದುಕೊಂಡಿದೆ.

