6,6,6,6,6: ಟಿಮ್ ಡೇವಿಡ್ ಸಿಡಿಲಬ್ಬರ: 3 ರನ್ಗಳ ರೋಚಕ ಜಯ
St Kitts and Nevis Patriots vs Saint Lucia Kings: 201 ರನ್ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಜೇಸನ್ ಹೋಲ್ಡರ್ 29 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 63 ರನ್ ಬಾರಿಸಿದರು. ಪರಿಣಾಮ ಕೊನೆಯ ಓವರ್ನಲ್ಲಿ 13 ರನ್ಗಳ ಅವಶ್ಯಕತೆಯಿತ್ತು. 20ನೇ ಓವರ್ ಎಸೆದ ಡೇವಿಡ್ ವೀಝ ಕೇವಲ 9 ರನ್ ನೀಡುವ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ 3 ರನ್ಗಳ ರೋಚಕ ಜಯ ತಂದುಕೊಟ್ಟರು.
ಕೆರಿಬಿಯನ್ ಪ್ರೀಮಿಯರ್ ಲೀಗ್ನ 6ನೇ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡ ರೋಚಕ ಜಯ ಸಾಧಿಸಿದೆ. ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ಹಾಗೂ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡದ ನಾಯಕ ಜೇಸನ್ ಹೋಲ್ಡರ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ ಜಾನ್ಸನ್ ಚಾರ್ಲ್ಸ್ ಉತ್ತಮ ಆರಂಭ ಒದಗಿಸಿದರು. 28 ಎಸೆತಗಳನ್ನು ಎದುರಿಸಿದ ಚಾರ್ಲ್ಸ್ 4 ಸಿಕ್ಸ್ ಹಾಗೂ 4 ಪೋರ್ಗಳೊಂದಿಗೆ 52 ರನ್ ಬಾರಿಸಿದರು. ಆ ಬಳಿಕ ಬಂದ ರೋಸ್ಟನ್ ಚೇಸ್ 38 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 61 ರನ್ ಕಲೆಹಾಕಿದರು.
ಇನ್ನು ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ಟಿಮ್ ಡೇವಿಡ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 23 ಎಸೆತಗಳನ್ನು ಎದುರಿಸಿದ ಟಿಮ್ ಡೇವಿಡ್ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 46 ರನ್ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿತು.
201 ರನ್ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಜೇಸನ್ ಹೋಲ್ಡರ್ 29 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 63 ರನ್ ಬಾರಿಸಿದರು. ಪರಿಣಾಮ ಕೊನೆಯ ಓವರ್ನಲ್ಲಿ 13 ರನ್ಗಳ ಅವಶ್ಯಕತೆಯಿತ್ತು. 20ನೇ ಓವರ್ ಎಸೆದ ಡೇವಿಡ್ ವೀಝ ಕೇವಲ 9 ರನ್ ನೀಡುವ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ 3 ರನ್ಗಳ ರೋಚಕ ಜಯ ತಂದುಕೊಟ್ಟರು.
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್

