6,6,6,6,6: ಟಿಮ್ ಡೇವಿಡ್ ಸಿಡಿಲಬ್ಬರ: 3 ರನ್​ಗಳ ರೋಚಕ ಜಯ

Updated on: Aug 20, 2025 | 10:53 AM

St Kitts and Nevis Patriots vs Saint Lucia Kings: 201 ರನ್​ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಜೇಸನ್ ಹೋಲ್ಡರ್ 29 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್​ ಬಾರಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 13 ರನ್​ಗಳ ಅವಶ್ಯಕತೆಯಿತ್ತು. 20ನೇ ಓವರ್​ ಎಸೆದ ಡೇವಿಡ್ ವೀಝ ಕೇವಲ 9 ರನ್​ ನೀಡುವ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ 3 ರನ್​ಗಳ ರೋಚಕ ಜಯ ತಂದುಕೊಟ್ಟರು.

ಕೆರಿಬಿಯನ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡ ರೋಚಕ ಜಯ ಸಾಧಿಸಿದೆ. ವಾರ್ನರ್​ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ಹಾಗೂ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡದ ನಾಯಕ ಜೇಸನ್ ಹೋಲ್ಡರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ ಜಾನ್ಸನ್ ಚಾರ್ಲ್ಸ್ ಉತ್ತಮ ಆರಂಭ ಒದಗಿಸಿದರು. 28 ಎಸೆತಗಳನ್ನು ಎದುರಿಸಿದ ಚಾರ್ಲ್ಸ್ 4 ಸಿಕ್ಸ್ ಹಾಗೂ 4 ಪೋರ್​ಗಳೊಂದಿಗೆ 52 ರನ್ ಬಾರಿಸಿದರು. ಆ ಬಳಿಕ ಬಂದ ರೋಸ್ಟನ್ ಚೇಸ್ 38 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 8 ಫೋರ್​ಗಳೊಂದಿಗೆ 61 ರನ್ ಕಲೆಹಾಕಿದರು.

ಇನ್ನು ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ಟಿಮ್ ಡೇವಿಡ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 23 ಎಸೆತಗಳನ್ನು ಎದುರಿಸಿದ ಟಿಮ್ ಡೇವಿಡ್ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 46 ರನ್​ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿತು.

201 ರನ್​ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಜೇಸನ್ ಹೋಲ್ಡರ್ 29 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್​ ಬಾರಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 13 ರನ್​ಗಳ ಅವಶ್ಯಕತೆಯಿತ್ತು. 20ನೇ ಓವರ್​ ಎಸೆದ ಡೇವಿಡ್ ವೀಝ ಕೇವಲ 9 ರನ್​ ನೀಡುವ ಮೂಲಕ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ 3 ರನ್​ಗಳ ರೋಚಕ ಜಯ ತಂದುಕೊಟ್ಟರು.