VIDEO: ಬರೋಬ್ಬರಿ 109 ಮೀಟರ್ ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್
Australia vs South Africa: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟಿಮ್ ಡೇವಿಡ್ (83) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 178 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 161 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ 17 ರನ್ಗಳ ಜಯ ಸಾಧಿಸಿದೆ.
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ದಾಂಡಿಗ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಡಾರ್ವಿನ್ನ ಮರ್ರಾರ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 30 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
ಸೌತ್ ಆಫ್ರಿಕಾ ಬೌಲರ್ಗಳನ್ನು ಮನಸೋ ಇಚ್ಚೆ ದಂಡಿಸಿದ ಡೇವಿಡ್ 52 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ಗಳೊಂದಿಗೆ 83 ರನ್ಗಳಿಸಿದರು. ಈ ಎಂಟು ಸಿಕ್ಸ್ಗಳಲ್ಲಿ ಒಂದು ಸಿಕ್ಸರ್ 109 ಮೀಟರ್ ದೂರಕ್ಕೆ ತಲುಪಿತ್ತು ಎಂಬುದು ವಿಶೇಷ. ಮುತ್ತುಸಾಮಿ ಎಸೆದ 12ನೇ ಓವರ್ನ ಮೊದಲ ಎಸೆತದಲ್ಲಿ ಟಿಮ್ ಡೇವಿಡ್ ಡೀಪ್ ಕವರ್ನತ್ತ 109 ಮೀಟರ್ ಉದ್ದದ ಸಿಕ್ಸ್ ಸಿಡಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟಿಮ್ ಡೇವಿಡ್ (83) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 178 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 161 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ 17 ರನ್ಗಳ ಜಯ ಸಾಧಿಸಿದೆ.