ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಸದ್ದು: ಆಡಳಿತಾರೂಢ ಕಾಂಗ್ರೆಸ್​​ ನಡೆಗೆ ವಿಪಕ್ಷ ಬಿಜೆಪಿ ಕಿಡಿ

Updated on: Dec 09, 2025 | 12:45 PM

ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ಅವರು ವಿಧಾನಸಭೆಯಲ್ಲಿ ಟಿಪ್ಪು ಜಯಂತಿಯನ್ನು ಪುನರಾರಂಭಿಸಲು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆರ್‌. ಅಶೋಕ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಹಿಂಸಾಚಾರಕ್ಕೂ ಕಾರಣವಾಗಿದ್ದ ಈ ಆಚರಣೆ ಈಗ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, ಡಿಸೆಂಬರ್​​ 09: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿಧಾನಸಭೆಯ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ ವಿರೋಧ ಹೇಳಿಕೆಗಳು ವ್ಯಕ್ತವಾಗಿದ್ದು, ಹಿಂಸಾಚಾರಕ್ಕೂ ಇದು ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಟಿಪ್ಪು ಜಯಂತಿ ಆದ್ರೂ ಮಾಡ್ಕೊಳ್ಳಲಿ, ಲಾಡೆನ್ ಜಯಂತಿ ಆದ್ರೂ ಮಾಡ್ಕೊಳ್ಳಲಿ. ಅವರ ಸರ್ಕಾರ ಇದೆ. ಜನರಿಗೆ ಇವರು ಯಾರ ಪರ ಎಂದು ಸ್ಪಷ್ಟವಾಗಿ ಗೊತ್ತಾಗತ್ತೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 09, 2025 12:44 PM