ನಾಶ ಆಗಬೇಕಂದ್ರೆ ಟಿಪ್ಪು ಜಯಂತಿ ಪ್ರಾರಂಭಿಸಲಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಸನಗೌಡ ಯತ್ನಾಳ್ ಗರಂ
ಬಸನಗೌಡ ಪಾಟೀಲ್ ಯತ್ನಾಳ್ ಅವರು ದ್ವೇಷ ಭಾಷಣ ವಿಧೇಯಕ, ಗೋಹತ್ಯೆ ನಿಷೇಧ ಕಾಯ್ದೆ ಸಡಿಲೀಕರಣ ಮತ್ತು ಟಿಪ್ಪು ಜಯಂತಿ ಪುನರಾರಂಭದ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಚೋದನಕಾರಿ ಭಾಷಣಕ್ಕೆ ಸರ್ಕಾರವೇ ಹೊಣೆ ಎಂದು ಆರೋಪಿಸಿ, ಟಿಪ್ಪು ಜಯಂತಿ ಪುನರಾರಂಭ ವಿರೋಧಿಸಿ ಚುನಾವಣಾ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು.
ಬೆಳಗಾವಿ, ಡಿಸೆಂಬರ್ 9: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತು ವಾಗ್ದಾಳಿ ನಡೆಸಿದ್ದಾರೆ. ದ್ವೇಷ ಭಾಷಣವನ್ನು ವಿರೋಧಿಸುವ ವಿಧೇಯಕವನ್ನು ಜಾರಿಗೆ ತರುವ ಸರ್ಕಾರದ ನಿರ್ಧಾರವನ್ನು ಅವರು ಪ್ರಶ್ನಿಸಿದ್ದಾರೆ. ಹೈದರಾಬಾದ್‌ನ ಓವೈಸಿ ಮತ್ತು ದೆಹಲಿಯ ಇಮಾಮ್‌ನಂತಹವರ ಪ್ರಚೋದನಕಾರಿ ಭಾಷಣಗಳಿಂದ ದ್ವೇಷ ಭಾಷಣ ಪ್ರಾರಂಭವಾಗಿದ್ದು, ಇದಕ್ಕೆ ಹಿಂದೂಗಳು ಪ್ರತಿಕ್ರಿಯಿಸುವುದು ಅನಿವಾರ್ಯ ಎಂದು ಯತ್ನಾಳ್ ಹೇಳಿದ್ದಾರೆ. ಹಿಂದೂ ವಿರೋಧಿ ಕಾನೂನುಗಳನ್ನು ರಚಿಸಲಾಗುತ್ತಿದೆ ಎಂದು ಆರೋಪಿಸಿ, ಗೋಹತ್ಯೆ ನಿಷೇಧ ಕಾಯ್ದೆಯ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಪುನರಾರಂಭ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುವ ಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಕಾಂಗ್ರೆಸ್ ಟಿಪ್ಪುವನ್ನು ಬೆಂಬಲಿಸಿದಾಗಲೆಲ್ಲಾ ನಾಶವಾಗಿದೆ. ಪುನಃ ನಾಶವಾಗಬೇಕಿದ್ದರೆ ಟಿಪ್ಪು ಜಯಂತಿಯನ್ನು ಪ್ರಾರಂಭಿಸಲಿ ಎಂದು ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅಧಿವೇಶನದಲ್ಲಿ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ಯತ್ನಾಳ್ ಸ್ವಾಗತಿಸಿದ್ದಾರೆ.
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
