AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್

ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್

ವಿವೇಕ ಬಿರಾದಾರ
|

Updated on: May 13, 2025 | 2:38 PM

ಕೇಂದ್ರ ಸರ್ಕಾರದ ಆದೇಶದಂತೆ, ರಾಷ್ಟ್ರೀಯ ಏಕತೆಯ ಸಂಕೇತವಾಗಿ ಕರ್ನಾಟಕದಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಮೇ 15 ರಿಂದ 23 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಈ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮೇ 15 ರಂದು ಮಲ್ಲೇಶ್ವರದಿಂದ 18 ನೇ ಕ್ರಾಸ್ ವರೆಗೆ ಯಾತ್ರೆ ನಡೆಯಲಿದೆ. ಯಾವುದೇ ರಾಜಕೀಯ ಪಕ್ಷದ ಧ್ವಜಗಳ ಬಳಕೆಗೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಸೇನಾಪಡೆಗಳಿಗೆ ಬೆಂಬಲ ವ್ಯಕ್ತಪಡಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶ.

ಬೆಂಗಳೂರು, ಮೇ 13: ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ಹೆಸರಿನಲ್ಲಿ ದೇಶಾದ್ಯಂತ ಯಾವುದೇ ಪಕ್ಷಭೇದವಿಲ್ಲದೆ ತಿರಂಗಾ ಯಾತ್ರೆ ಮಾಡಬೇಕೆಂಬುದು ಕೇಂದ್ರ ಸರ್ಕಾರ ಹೇಳಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​.ಅಶೋಕ್ ತಿಳಿಸಿದರು. ಸೇನಾಪಡೆಗಳ ಜೊತೆ ನಿಂತು ಬಲ ತುಂಬುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ. ಹೀಗಾಗಿ, ರಾಜ್ಯದಲ್ಲಿ ಕೂಡ ದೊಡ್ಡಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ. ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ. ಮಲ್ಲೇಶ್ವರಂನ ಶಿರೂರು ಪಾರ್ಕ್​ನಿಂದ 18ನೇ ಕ್ರಾಸ್​ವರೆಗೆ ತಿರಂಗಾ ಯಾತ್ರೆ ಮಾಡುತ್ತೇವೆ. ಮೇ 16, 17ರಂದು ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ. ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ತಿರಂಗಾ ಯಾತ್ರೆಯಲ್ಲಿ ಯಾವುದೇ ಪಕ್ಷದ ಧ್ವಜ ಬಳಕೆ ಮಾಡಲ್ಲ ಎಂದು ಹೇಳಿದರು.