ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಖಾಸಗಿ ಬಸ್ ಟೈರ್​ಗಳು; ಕೂದಲೆಳೆ ಅಂತರದಲ್ಲಿ ಬಚಾವ್, ದೃಶ್ಯ ಸೆರೆ

Edited By: ಆಯೇಷಾ ಬಾನು

Updated on: Jul 17, 2024 | 10:16 AM

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ತೆರಳುವಾಗ ಖಾಸಗಿ ಬಸ್​ನ ಹಿಂಬದಿಯ ಟೈಯರ್​ಗಳು ಏಕಾಏಕಿ ಕಳಚಿ ಬಿದ್ದಿವೆ. ಸದ್ಯ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಯಾಣಿಕರಲ್ಲಿ ಭಯ ಹೆಚ್ಚಾಗಿತ್ತು.

ಚಿಕ್ಕಮಗಳೂರು, ಜುಲೈ.17: ಚಲಿಸುತ್ತಿದ್ದಾಗಲೇ ಖಾಸಗಿ ಬಸ್​​ನ ಟೈರುಗಳು ಕಳಚಿ ಓಡಿದ ಘಟನೆ ನಡೆದಿದ್ದು ಅದೃಷ್ಟವಶಾತ್​ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್​ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ತೆರಳುವಾಗ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಬಸ್​ನ ಟೈಯರ್​ಗಳು ಕಳಚಿ ಬಿದ್ದಿವೆ. ಬಸ್​ನ ಹಿಂಬದಿ ಟೈರು ಕಳಚಿ ಓಡಿದ್ದು ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

ಬಸ್​ನ ಟೈರುಗ:ಉ ಕಳಚಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ಮಹಾ ದುರಂತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More