ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು: ಈಶ್ವರ್ ಖಂಡ್ರೆ
ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲ ಸದಸ್ಯರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಹೇಳಿದ ಖಂಡ್ರೆ ಸಮಾರು 2-3 ಲಕ್ಷ ಜನ ಸೇರಲಿದ್ದಾರೆ ಎಂದರು.
ದಾವಣಗೆರೆ, ಮೇ 15: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ (Hospet) ಆಯೋಜಿಸಲಾಗುತ್ತಿರುವ ಸಾಧನಾ ಸಮಾವೇಶದ ಪೂರ್ವ ಸಿದ್ಧತೆ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳೊಂದಿಗೆ ಮಾತಾಡಿದರು. ಸಮಾರಂಭದಲ್ಲಿ ಸುಮಾರು ಮೂರೂವರೆ ಸಾವಿರಕ್ಕಿಂತ ಹೆಚ್ಚು ಹಾಡಿ, ತಾಂಡಾ ಮತ್ತು ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿರುವ ಒಂದು ಲಕ್ಷದಷ್ಟು ಜನಕ್ಕೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನ ವಿತರಿಸಲಾಗುವುದು ಎಂದು ಹೇಳಿದರು. ಹಕ್ಕು ಪತ್ರಗಳನ್ನು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿ ಖಾತಾಗಳನ್ನೂ ನೀಡಲಾಗುವುದು ಎಂದು ಖಂಡ್ರೆ ಹೇಳಿದರು.
ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಏರಿಕೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ