AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಸುಷ್ಮಾ ಚಕ್ರೆ
|

Updated on: Feb 05, 2026 | 8:51 PM

Share

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು "ಕ್ರೂರ ಸರ್ಕಾರ" ಎಂದು ಟೀಕಿಸಿದ ಮೋದಿ, "ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಒಳನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ?" ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ” ಎಂದು ಟೀಕಿಸಿದ ಮೋದಿ, “ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಒಳನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ?” ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ