AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಬಂಧನ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಬಂಧನ

ಸುಷ್ಮಾ ಚಕ್ರೆ
|

Updated on: Oct 10, 2026 | 4:08 PM

Share

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ನಾಯಕರು, ದೆಹಲಿಯ ಸೌತ್ ಅವೆನ್ಯೂದಲ್ಲಿರುವ ಬಸ್ ನಿಲ್ದಾಣದ ಬಳಿ ಧರಣಿ ಕುಳಿತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಮತಾ ಬ್ಯಾನರ್ಜಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ಎಸ್​ಐಆರ್​ ಪ್ರಕ್ರಿಯೆಯ ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ಬೃಹತ್ ಹೋರಾಟದ ಭಾಗವಾಗಿ ಈ ಪ್ರತಿಭಟನೆ ನಡೆದಿದೆ. ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟುಹೋಗುವ ಸಾಧ್ಯತೆಯಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನವದೆಹಲಿ, ಅಕ್ಟೋಬರ್ 10: ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕಿ ಮಮತಾ ಬ್ಯಾನರ್ಜಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿಯವರ ಜೊತೆಗೆ ಟಿಎಂಸಿ ಸಂಸದರಾದ ಡೆರೆಕ್ ಒಬ್ರೇನ್, ಪ್ರತಿಮಾ ಮಂಡಲ್ ಹಾಗೂ ಡೋಲಾ ಸೇನ್ ಅವರನ್ನು ಕೂಡ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ನಾಯಕರು, ದೆಹಲಿಯ ಸೌತ್ ಅವೆನ್ಯೂದಲ್ಲಿರುವ ಬಸ್ ನಿಲ್ದಾಣದ ಬಳಿ ಧರಣಿ ಕುಳಿತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಮತಾ ಬ್ಯಾನರ್ಜಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ಎಸ್​ಐಆರ್​ ಪ್ರಕ್ರಿಯೆಯ ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ಬೃಹತ್ ಹೋರಾಟದ ಭಾಗವಾಗಿ ಈ ಪ್ರತಿಭಟನೆ ನಡೆದಿದೆ. ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟುಹೋಗುವ ಸಾಧ್ಯತೆಯಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಮತದಾರರ ಪಟ್ಟಿಯ ಅಕ್ರಮಗಳಿಗೆ ಹೊಣೆಗಾರರನ್ನಾಗಿ ಮಾಡಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕೆಂದು ಇಂಡಿಯ  ಮೈತ್ರಿಕೂಟ ಆಗ್ರಹಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More