ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್

Updated on: Jun 26, 2026 | 11:48 AM

ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಓಟದಲ್ಲಿ ಅವರು ಬರೋಬ್ಬರಿ 6 ಕಿಲೋಮೀಟರ್ ಓಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಓಟದಲ್ಲಿ ಅವರು ಬರೋಬ್ಬರಿ 6 ಕಿಲೋಮೀಟರ್ ಓಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಟ, ಸಿಎಂ ದಳಪತಿ ವಿಜಯ್ ಅವರು ಪಾಲ್ಗೊಂಡಿದ್ದಾರೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಓಟದಲ್ಲಿ ಅವರು ಬರೋಬ್ಬರಿ 6 ಕಿಲೋಮೀಟರ್ ಓಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಇಂತಹ ಕಾರ್ಯಕ್ರಮಗಳಿಗೆ ಕೇವಲ ಚಾಲನೆ ನೀಡಿ ನಿರ್ಗಮಿಸುತ್ತಾರೆ. ಆದರೆ, ತಳಪತಿ ವಿಜಯ್ ಅವರು ಯಾವುದೇ ರಾಜಕೀಯ ಹಮ್ಮು-ಬಿಮ್ಮು ಇಲ್ಲದೆ, ತಾವೂ ಒಬ್ಬ ಸಾಮಾನ್ಯ ನಾಗರಿಕನಂತೆ ಜನರೊಂದಿಗೆ ಹೆಜ್ಜೆ ಹಾಕಿದ್ದು ಅವರ ಸರಳತೆಗೆ ಸಾಕ್ಷಿಯಾಗಿದೆ. ಭದ್ರತೆಯ ನಡುವೆಯೂ ಸಾರ್ವಜನಿಕರ ಜೊತೆ ಜೊತೆಯಾಗಿಯೇ 6 ಕಿಲೋಮೀಟರ್ ದೂರವನ್ನು ಓಡಿ ಮುಗಿಸಿದ ಸಿಎಂ ವಿಜಯ್ ಅವರ ಫಿಟ್‌ನೆಸ್ ಹಾಗೂ ಸರಳ ಗುಣಕ್ಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ತಮಿಳುನಾಡಿನ ಯುವ ಜನತೆಯನ್ನು ಮಾದಕ ದ್ರವ್ಯದ ಜಾಲದಿಂದ ಮುಕ್ತಗೊಳಿಸಲು ಸ್ವತಃ ಮುಖ್ಯಮಂತ್ರಿಗಳೇ ರಸ್ತೆಗಿಳಿದು ಮಾದರಿಯಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More