ಎಲ್ಲರಿಗೆ ಆಶ್ಚರ್ಯವಾಗುವ ರೀತಿಯಲ್ಲಿ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 22, 2024 | 12:24 PM

ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ವೀಕ್ಷರಾಗಿ ತೆರಳಿದ್ದ ಪರಮೇಶ್ವರ್ ಅಲ್ಲ್ಲೂ ಕಾಂಗ್ರೆಸ್, ಉದ್ಧವ್ ಠಾಕ್ರೆಯವರ ಶಿವ ಸೇನಾ ಮತ್ತ್ತು ಶರದ್ ಪವಾರ್ ಬಣದ ಎನ್​ಸಿಪಿ ಪಕ್ಷಗಳ ಮಹಾವಿಕಾಸ್ ಅಘಾಡಿ ಒಕ್ಕೂಟ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದರು.

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಎಲ್ಲ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು. ಎಕ್ಸಿಟ್ ಪೋಲ್ ಗಳ ಸಮೀಕ್ಷೆ ಬೇರೆ ಇರಬಹುದು ಆದರೆ ಎಲ್ಲರೂ ಆಶ್ಚರ್ಯಪಡುವ ರೀತಿಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪರಮೇಶ್ವರ್ ಹೇಳಿದರು.  ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕೆಲಸ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.