‘ನನಗೆ ಗೊತ್ತಿಲ್ಲದ ವಿಚಾರವನ್ನು ಕಲಿತು ಸಿನಿಮಾ ಮಾಡಿದ್ದೇನೆ’; ‘ಟೋಬಿ’ ಬಗ್ಗೆ ರಾಜ್​ ಬಿ. ಶೆಟ್ಟಿ ಮಾತು

ರಾಜ್​ ಬಿ. ಶೆಟ್ಟಿ ಅವರು ಟೋಬಿ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಭಿನ್ನ ಪಾತ್ರಗಳ ಮೂಲಕ, ಹೊಸ ರೀತಿಯ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ತಲೆಯ ಮೇಲೆ ಕೂದಲು ಇಲ್ಲ ಎನ್ನುವ ವಿಚಾರ ಇಟ್ಟುಕೊಂಡೇ ಅವರು ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮಾಡಿದ್ದರು. ಈಗ ಅವರು ಟೋಬಿ (Toby Movie) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಇಷ್ಟು ವರ್ಷ ಗೊತ್ತಿರುವ ವಿಚಾರವನ್ನೇ ಹೇಳಿದ್ದೇವೆ. ಈ ಸಿನಿಮಾದಲ್ಲಿ ಗೊತ್ತಿಲ್ಲದ ವಿಚಾರವನ್ನು ಹೇಳೋಕೆ ಪ್ರಯತ್ನಿಸಿದ್ದೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us