NityaBhavishya: ಯುಗಾದಿ ಹಬ್ಬದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳಲು ವಿಡಿಯೋ ನೋಡಿ

NityaBhavishya: ಯುಗಾದಿ ಹಬ್ಬದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳಲು ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Mar 22, 2023 | 6:41 AM

Ugadi Astrology: ಬುಧವಾರ 22 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ, ಶುಭಕೃತ ನಾಮ ಸಂವತ್ಸರದ ಯುಗಾದಿ ಹಬ್ಬದ ಶುಭಾಶಯಗಳು. ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷದಂದು ಭೂಮಿ ಸ್ಪರ್ಶಿಸುವ ಭಾಸ್ಕರನ ಕಿರಿಣಗಳು ಬಹಳ ವಿಶೇಷವಾಗಿರುತ್ತವೆ. ಇಂದು ಪ್ರಾತಃ ಕಾಲದಲ್ಲಿ ಎದ್ದು ಅಭ್ಯಂಜಕ ಸ್ನಾನ ಮಾಡಿ, ತಳಿರು ತೋರಣಗಳಿಂದ ಮನೆಯನ್ನು ಶೃಂಗರಿಸಿ ಬೇವು ಬೆಲ್ಲ ಸವಿಬೇಕು. ಕಷ್ಟ ಮತ್ತು ಸುಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿದೆ. ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಕ್ಲ, ಕರಣ : ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:10ರವರೆಗೆ, ಯಮಘಂಡ ಕಾಲ ಬೆಳಗ್ಗೆ 08:08 ರಿಂದ 09:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:09 ರಿಂದ ಮಧ್ಯಾಹ್ನ 12:40ರ ವರೆಗೆ.