AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toll Price Hike: ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ

Toll Price Hike: ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ

ಮಂಜುನಾಥ ಎಚ್​. ವಿ.
| Edited By: |

Updated on: Sep 01, 2026 | 1:53 PM

Share

ಕರ್ನಾಟಕದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಮತ್ತೆ ಏರಿಕೆಯಾಗಿದೆ. ನೆಲಮಂಗಲದಿಂದ ಹಾಸನ ಮಾರ್ಗದ ದೇವಿಹಳ್ಳಿ ಟೋಲ್‌ನಲ್ಲಿ ಕಾರು, ಲಘು ವಾಣಿಜ್ಯ ವಾಹನ ಹಾಗೂ ಬಸ್‌, ಟ್ರಕ್‌ಗಳಿಗೆ ₹5 ರಿಂದ ₹10 ಗಳಷ್ಟು ಹೆಚ್ಚಳವಾಗಿದೆ. ರೈತರು ಸೇರಿದಂತೆ ವಾಹನ ಸವಾರರು ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಹೆಚ್ಚುವರಿ ಆರ್ಥಿಕ ಹೊರೆಯನ್ನು ಸೃಷ್ಟಿಸಿದೆ ಎಂದಿದ್ದಾರೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.

ನೆಲಮಂಗಲ, ಸೆಪ್ಟೆಂಬರ್ 1: ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಬಿದ್ದಿದೆ. ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಮತ್ತೆ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ವಿಶೇಷವಾಗಿ ನೆಲಮಂಗಲದಿಂದ ಹಾಸನಕ್ಕೆ ತೆರಳುವ ಮಾರ್ಗದ ದೇವಿಹಳ್ಳಿ ಟೋಲ್‌ನಲ್ಲಿ ಶುಲ್ಕದಲ್ಲಿ ₹5 ರಿಂದ ₹10 ಗಳಷ್ಟು ಹೆಚ್ಚಳವಾಗಿದೆ. ಕಾರುಗಳಿಗೆ ಪ್ರತಿದಿನದ ಏಕಮುಖ ಸಂಚಾರಕ್ಕೆ ₹60 ಇದ್ದ ಶುಲ್ಕದಲ್ಲಿ ಬದಲಾವಣೆಯಾಗದೆ, ದಿನದ ಸಂಚಾರಕ್ಕೆ (ಮಲ್ಟಿಪಲ್ ಎಂಟ್ರಿ) ₹85 ಇದ್ದ ಶುಲ್ಕ ₹90 ಕ್ಕೆ ಏರಿದೆ. ಲಘು ವಾಣಿಜ್ಯ ವಾಹನಗಳ ಶುಲ್ಕವು ₹100 ರಿಂದ ₹105 ಕ್ಕೆ ಏರಿಕೆಯಾಗಿದೆ. ಇದಲ್ಲದೆ, ಬಸ್‌ಗಳು ಮತ್ತು ಟ್ರಕ್‌ಗಳಿಗೂ ಕೂಡ ₹5 ರಿಂದ ₹10 ಗಳಷ್ಟು ಹೆಚ್ಚಳವಾಗಿದೆ.

ಈ ಶುಲ್ಕ ಹೆಚ್ಚಳಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಅನೇಕ ರೈತರು, ನಿರಂತರವಾಗಿ ಹೆದ್ದಾರಿಗಳನ್ನು ಬಳಸುವವರು, ಈ ಶುಲ್ಕ ಹೆಚ್ಚಳದಿಂದ ತಮಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸರ್ಕಾರ ಯಾವಾಗಲೂ ರೈತರ ಮೇಲೆ ಹೊರೆ ಹಾಕುತ್ತಿದೆ’ ಎಂದು ಕೆಲವರು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More