‘ಹಾಯ್​ ನಾನ್ನ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ಟಾಲಿವುಡ್​ ನಟ ನಾನಿ

Updated on: Dec 04, 2023 | 11:03 PM

ನಟ ನಾನಿ ಅವರಿಗೆ ಕರ್ನಾಟಕದಲ್ಲೂ ಅಭಿಮಾನಿಗಳು ಇದ್ದಾರೆ. ಅವರು ಅಭಿನಯಿಸಿರುವ ‘ಹಾಯ್​ ನಾನ್ನ’ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಈ ಸಿನಿಮಾದ ಪ್ರಚಾರದ ಸಲುವಾಗಿ ನಾನಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರಿಗೆ ಆತ್ಮೀಯವಾಗಿ ಸ್ವಾಗತ ಕೋರಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಟಾಲಿವುಡ್​ನ ಖ್ಯಾತ ನಟ ನಾನಿ (Nani) ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ನಟಿಸಿರುವ ‘ಹಾಯ್​ ನಾನ್ನ’ ಸಿನಿಮಾ ಡಿಸೆಂಬರ್​ 7ರಂದು ಬಿಡುಗಡೆ ಆಗಲಿದೆ. ಇದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಕಾಣಲಿದೆ. ಕನ್ನಡಕ್ಕೂ ಡಬ್​ ಆಗಿ ‘ಹಾಯ್​ ನಾನ್ನ’ (Hi Nanna) ಸಿನಿಮಾ ರಿಲೀಸ್​ ಆಗಲಿದೆ. ಬೆಂಗಳೂರಿನಲ್ಲಿ ಡಿಸೆಂಬರ್​ 4ರಂದು ಈ ಚಿತ್ರದ ಸುದ್ದಿಗೋಷ್ಠಿ ನಡೆಯಲಿದೆ. ಈ ಸಿನಿಮಾದಲ್ಲಿ ಬಹುಭಾಷಾ ನಟಿ ಮೃಣಾಲ್​ ಠಾಕೂರ್​ ಅವರು ಅಭಿನಯಿಸಿದ್ದಾರೆ. ಈ ವರ್ಷ ಬಿಡುಗಡೆ ಆಗಿದ್ದ ‘ದಸರಾ’ ಸಿನಿಮಾದಲ್ಲೂ ನಾನಿ ಅಬ್ಬರಿಸಿದ್ದರು. ‘ಹಾಯ್​ ನಾನ್ನ’ ಮೂಲಕ ಈಗ ಇನ್ನೊಂದು ಕಥೆಯನ್ನು ಅವರು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More